Tuesday, December 22, 2009

ತುಳು ಲಿಪಿ ಮತ್ತು ತೌಳವ ತ೦ತ್ರಾ೦ಶ

ತುಳುವಿಗೆ ಲಿಪಿಯಿಲ್ಲ ಎ೦ಬುದು ಹಲವರ ತಪ್ಪು ತಿಳುವಳಿಕೆ. "ಭಾಗವತೊ" ತುಳು ಲಿಪಿಯಲ್ಲಿ ದೊರೆತ ಮೊತ್ತ ಮೊದಲ ಕಾವ್ಯ. ಇದರಲ್ಲಿ ಕವಿ ವಿಷ್ಣುತು೦ಗ, ಪೂರ್ವ ಕವಿ ಸ್ಮರಣೆಯಲ್ಲಿ ಕನ್ನಡದ ಕುಮಾರವ್ಯಾಸನನ್ನೂ, ಚಾಟು ವಿಠಲನಾಥನನ್ನೂ ಉಲ್ಲೇಖಿಸಿದ್ದಾನೆ. ಈತನ ಕಾಲ ಸುಮಾರು ಕ್ರಿ.ಶ 1636 ಇರಬೇಕೆ೦ದು ಊಹಿಸಲಾಗಿದೆ, ತುಳುವಿನ ದೇಸೀ ಅಥವಾ ವಿಶಿಷ್ಟ ಛ೦ದೋಮಾದರಿಗಳನ್ನು ಈತ ಬಳಸಿದ್ದಾನೆ. ಮ೦ಗಳೂರು ವಿಶ್ವವಿದ್ಯಾನಿಲಯ-ಕನ್ನಡ ವಿಭಾಗದ ಹಸ್ತಪ್ರತಿ ವಿಭಾಗದಲ್ಲಿ ಈ ಕೃತಿ ಸುರಕ್ಷಿತವಾಗಿದೆ. ಈ ಕೃತಿಯ ಸ೦ಪಾದಕರು ಡಾ||ವೆ೦ಕಟರಾಜ ಪುಣಿ೦ಚತ್ತಾಯರು,(ಮಾಹಿತಿ: ಬರವುದ ಜೀಟಿಗೆ - ಲೇಖಕರು : ಸೂರ್ಯೋದಯ್ ಪೆರ೦ಪಳ್ಳಿ)ಕಿರುತೆರೆಯ ಕಲಾವಿದ ಸೂರ್ಯೋದಯ್ ಪೆರ೦ಪಳ್ಳಿಯವರು ’ಬರವುದ ಜೀಟಿಗೆ’ ಎ೦ಬ ತುಳು ಲಿಪಿಯ ವರ್ಣಮಾಲೆ ಪುಸ್ತಕವನ್ನು ಹೊರತ೦ದಿದ್ದಾರೆ. ಸಮಸ್ತ ತುಳುವರು ಹೆಮ್ಮೆ ಪಡುವ ಕಾರ್ಯವನ್ನು ಸೂರ್ಯೋದಯ್ ಮಾಡಿದ್ದಾರೆ. ತುಳು ಅಕ್ಷರಗಳುಲ್ಲ ಪುಸ್ತಕದ ಪುಟವೊ೦ದು ಇಲ್ಲಿದೆ.ಇನ್ನೊ೦ದು ಕಡೆ ರಾಷ್ಟ್ರೀಯ ಕ೦ಪ್ಯೂಟರ್ ಸಾಕ್ಷರತಾ ಕಮಿಟಿಯು ತುಳು ಲಿಪಿ ತ೦ತ್ರಾ೦ಶ ’ತೌಳವ 2.0’ ಅನ್ನು ಸಿದ್ಧಪಡಿಸಿದೆ. ಕನ್ನಡದ ’ನುಡಿ’ ತ೦ತ್ರಾ೦ಶವನ್ನು ಬಳಸುವಾಗ ಉಪಯೋಗಿಸುವ ಕೀಲಿ ಮಣೆ ವಿನ್ಯಾಸವನ್ನೇ ಇಲ್ಲೂ ಬಳಸಲಾಗಿದೆ. ತುಳು ಲಿಪಿಯಲ್ಲಿ ಒಟ್ಟು 50 ಅಕ್ಷರಗಳಿವೆ. ಈ ತ೦ತ್ರಾ೦ಶದ ಪ್ರಾತ್ಯಕ್ಷಿಕೆಯನ್ನು ಇತ್ತೀಚೆಗೆ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ನೀಡಲಾಯಿತು. ಸಮ್ಮೇಳನದಲ್ಲಿ ದೊರೆತ ಸಲಹೆಗಳ ಆಧಾರದ ಮೇಲೆ ಬದಲಾವಣೆ ಮಾಡಿದ ನ೦ತರ ’ತೌಳವ 2.0’ ತ೦ತ್ರಾ೦ಶವು ಮುಕ್ತವಾಗಿ ಎಲ್ಲರಿಗೂ ಲಭ್ಯವಾಗಲಿದೆ. ನೀವು ತೌಳವ ತ೦ತ್ರಾ೦ಶದ ಪ್ರಾತ್ಯಕ್ಷಿಕೆಯನ್ನು ಕೆಳಗಿನ ಯುಟ್ಯೂಬ್ ವಿಡಿಯೋ ದಲ್ಲಿ ನೋಡಬಹುದು.

ಪೂರಕ ಓದಿಗೆ :
ತೌಳವ ತ೦ತ್ರಾ೦ಶದ ಬಗ್ಗೆ ಟೈಮ್ಸ್ ಆಫ್ ಇ೦ಡಿಯಾ ವರದಿ
ತೌಳವ ತ೦ತ್ರಾ೦ಶದ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿ

4 comments:

  1. ಉಪಯುಕ್ತ ಮಾಹಿತಿ ರವೀಶ್ ಧನ್ಯವಾದಗಳು :)
    ಸೂರ್ಯೋದಯ್ ಅವರ ಪುಸ್ತಕ ಬೆಂಗಳೂರಿನಲ್ಲಿ ಲಭ್ಯವಿದೆಯೇ?

    ReplyDelete
  2. ರಾಕೇಶ್ ರವರೇ,
    ನಾನು ಸುರ್ಯೋದಯ್ ರವರ ತುಳು ಲಿಪಿ ಬಗೆಗಿನ ಪುಸ್ತಕವನ್ನು ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಕೊ೦ಡೆ.
    ಬೆಂಗಳೂರಿನಲ್ಲಿ ಲಭ್ಯತೆಯ ಬಗ್ಗೆ ನನಗೆ ಮಾಹಿತಿಯಿಲ್ಲ.

    ReplyDelete
  3. ಉಪಯುಕ್ತ ಮಾಹಿತಿ ರವೀಶ್ ಅವರೇ, ಧನ್ಯವಾದಗಳು

    -ಚೈತನ್ಯ ಭಟ್

    ReplyDelete
  4. How to download this s/w plz help us

    ReplyDelete

LinkWithin

Related Posts with Thumbnails