’ಪೃಥ್ವಿ’ ಈಗಿನ ಗಣಿ ರಾಜಕೀಯದ ಬಗೆಗಿನ ಚಿತ್ರವೆ೦ಬುದು ಈಗ ಸರ್ವ ವೇದ್ಯ. ಆದರೆ ಪ್ರಚಲಿತ ವಿದ್ಯಮಾನಗಳ ತೆರೆಯ ಮೇಲಿನ ನಿರೂಪಣೆ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ ಎ೦ಬುದು ಪ್ರಶ್ನೆ. ನನ್ನ ಪ್ರಕಾರ ಈ ಚಿತ್ರ ಕಳಪೆ ಚಿತ್ರಗಳ ಪಟ್ಟಿಯಲ್ಲಿ ಸೇರದಿದ್ದರೂ ಉತ್ತಮ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲವಾಗುತ್ತದೆ. ಆದರೂ ಮಾಮೂಲಿ ಚಿತ್ರಗಳಿಗಿ೦ತ ಭಿನ್ನವಾಗಿದೆ.
ಪೃಥ್ವಿ(ಪುನೀತ್) ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊ೦ಡ ದಿನದಿ೦ದ ಗಣಿ ದೊರೆಗಳ ರಾಜಕೀಯ ಒತ್ತಡಕ್ಕೆ ಗುರಿಯಾಗಬೇಕಾಗುತ್ತದೆ. ಇದ್ಯಾವುದಕ್ಕೂ ಸೊಪ್ಪು ಹಾಕದ ಅವನು ಮು೦ದೆ ಹಲವು ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಚಿತ್ರದ ಫಸ್ಟ್ ಹಾಫ್ ಜಿಲ್ಲಾಧಿಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವ ಬಗೆಯನ್ನು ತಿಳಿಸುತ್ತದೆ. ಇದಕ್ಕೆ ನಿರ್ದೇಶಕ ಜಾಕೋಬ್ ವರ್ಗೀಸ್ ಗೆ ಪೂರ್ಣ ಅ೦ಕಗಳು. ಆದರೆ ನೈಜ ಸನ್ನಿವೇಶಗಳನ್ನು ಚಿತ್ರಿಸುವ ಜೊತೆ ಜೊತೆಗೆ ಚಿತ್ರವನ್ನು ಕಮರ್ಶಿಯಲ್ ಆಗಿ ಪ್ರೇಕ್ಷಕರ ಮು೦ದಿಡುವ ತವಕದಲ್ಲಿ ಐದು ಯುಗಳ ಗೀತೆಗಳನ್ನು ತುರುಕಲಾಗಿದೆ. ಇವನ್ನು 2-3 ಹಾಡುಗಳಿಗೆ ಸೀಮಿತಗೊಳಿಸಬಹುದಿತ್ತು. ಇನ್ನು ನಾಯಕಿ ಪಾರ್ವತಿ ಮೆನನ್ ಹಾಡುಗಳಿಗೆ ಸೀಮಿತವಾದರೆ, ಅವಿನಾಶ್ ನಟನೆಗೆ ಅವಕಾಶಗಳು ಕಡಿಮೆ. ಚಿತ್ರದ ಪೂರ್ವಾರ್ಧ 2010 ದ ಕತೆಯಾದರೂ, ಉತ್ತರಾರ್ಧ 80 ಅಥವಾ 90 ರ ದಶಕದ ಕ್ಲೈಮ್ಯಾಕ್ಸ್ ಆಗಿದೆ. ನಾಯಕ ಏಕಮೇವ ಶತ್ರು ಸ೦ಹಾರಕನಾಗಿ ಹೊರಹೊಮ್ಮುವುದು ಕನ್ನಡದಲ್ಲಿ ಸಾಹಸ ಪ್ರಧಾನ ಚಿತ್ರಗಳು ಶುರುವಾಗಿನಿ೦ದಲೂ ನಡೆದುಕೊ೦ಡು ಬ೦ದ ಪರಿಪಾಠ. ಇಲ್ಲೂ ಅದೇ ಆಗಿದೆ. ಅದಕ್ಕೇನು ಬೇಜಾರಿಲ್ಲ ಬಿಡಿ - ಆದರೆ ಚಿತ್ರದ ಕೊನೆ ದೃಶ್ಯಗಳು ತೀರಾ ನಾಟಕೀಯ ಸನ್ನಿವೇಶಗಳೆನಿಸಿ ಚಿತ್ರದ ಬಗ್ಗೆ ಅದುವರೆಗೂ ಇದ್ದ ಒಳ್ಳೆಯ ಅಭಿಪ್ರಾಯವನ್ನು ಹೋಗಲಾಡಿಸುತ್ತದೆ.
ಚಿತ್ರದಲ್ಲಿ ಕ೦ಡು ಬರುವ ಸೋಜಿಗವೆ೦ದರೆ ಚಿತ್ರ ಶುರುವಾಗುವ ಮು೦ಚೆ ಬರುವ ಸೂಚನೆ - ಈ ಚಿತ್ರ ಯಾವುದೇ ಘಟನೆ/ವ್ಯಕ್ತಿಗಳಿಗೆ ಸ೦ಬ೦ಧ ಪಟ್ಟಿದ್ದಲ್ಲವೆ೦ಬುದು ಹಾಸ್ಯಾಸ್ಪದವಾಗಿದೆ. ಚಿತ್ರದಲ್ಲಿ ಬರುವ ಟಿವಿ ವಾಹಿನಿ, ಪಾತ್ರಗಳು ಈಗಿನ ಕರ್ನಾಟಕದ ರಾಜಕೀಯ, ಮಾಧ್ಯಮ ವಲಯಕ್ಕೆ ನೇರ ಸ೦ಬ೦ಧಪಟ್ಟಿರುವುದನ್ನು ಯಾರು ಬೇಕಾದರೂ ಹೇಳಬಹುದು. ಚಿತ್ರದ ಕೆಲವು ಸ೦ಭಾಷಣೆಗಳಲ್ಲೇ ಇದು ಸ್ಪಷ್ಟವಾಗುತ್ತದೆ. ಅಷ್ಟಲ್ಲದೆ ಮಾಜಿ ಪ್ರಧಾನಿಗಳು ಚಿತ್ರ ನೋಡಲಿಕ್ಕೆ ಹೋಗುತ್ತಾರೆಯೇ?
ಪೃಥ್ವಿ(ಪುನೀತ್) ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊ೦ಡ ದಿನದಿ೦ದ ಗಣಿ ದೊರೆಗಳ ರಾಜಕೀಯ ಒತ್ತಡಕ್ಕೆ ಗುರಿಯಾಗಬೇಕಾಗುತ್ತದೆ. ಇದ್ಯಾವುದಕ್ಕೂ ಸೊಪ್ಪು ಹಾಕದ ಅವನು ಮು೦ದೆ ಹಲವು ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಚಿತ್ರದ ಫಸ್ಟ್ ಹಾಫ್ ಜಿಲ್ಲಾಧಿಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವ ಬಗೆಯನ್ನು ತಿಳಿಸುತ್ತದೆ. ಇದಕ್ಕೆ ನಿರ್ದೇಶಕ ಜಾಕೋಬ್ ವರ್ಗೀಸ್ ಗೆ ಪೂರ್ಣ ಅ೦ಕಗಳು. ಆದರೆ ನೈಜ ಸನ್ನಿವೇಶಗಳನ್ನು ಚಿತ್ರಿಸುವ ಜೊತೆ ಜೊತೆಗೆ ಚಿತ್ರವನ್ನು ಕಮರ್ಶಿಯಲ್ ಆಗಿ ಪ್ರೇಕ್ಷಕರ ಮು೦ದಿಡುವ ತವಕದಲ್ಲಿ ಐದು ಯುಗಳ ಗೀತೆಗಳನ್ನು ತುರುಕಲಾಗಿದೆ. ಇವನ್ನು 2-3 ಹಾಡುಗಳಿಗೆ ಸೀಮಿತಗೊಳಿಸಬಹುದಿತ್ತು. ಇನ್ನು ನಾಯಕಿ ಪಾರ್ವತಿ ಮೆನನ್ ಹಾಡುಗಳಿಗೆ ಸೀಮಿತವಾದರೆ, ಅವಿನಾಶ್ ನಟನೆಗೆ ಅವಕಾಶಗಳು ಕಡಿಮೆ. ಚಿತ್ರದ ಪೂರ್ವಾರ್ಧ 2010 ದ ಕತೆಯಾದರೂ, ಉತ್ತರಾರ್ಧ 80 ಅಥವಾ 90 ರ ದಶಕದ ಕ್ಲೈಮ್ಯಾಕ್ಸ್ ಆಗಿದೆ. ನಾಯಕ ಏಕಮೇವ ಶತ್ರು ಸ೦ಹಾರಕನಾಗಿ ಹೊರಹೊಮ್ಮುವುದು ಕನ್ನಡದಲ್ಲಿ ಸಾಹಸ ಪ್ರಧಾನ ಚಿತ್ರಗಳು ಶುರುವಾಗಿನಿ೦ದಲೂ ನಡೆದುಕೊ೦ಡು ಬ೦ದ ಪರಿಪಾಠ. ಇಲ್ಲೂ ಅದೇ ಆಗಿದೆ. ಅದಕ್ಕೇನು ಬೇಜಾರಿಲ್ಲ ಬಿಡಿ - ಆದರೆ ಚಿತ್ರದ ಕೊನೆ ದೃಶ್ಯಗಳು ತೀರಾ ನಾಟಕೀಯ ಸನ್ನಿವೇಶಗಳೆನಿಸಿ ಚಿತ್ರದ ಬಗ್ಗೆ ಅದುವರೆಗೂ ಇದ್ದ ಒಳ್ಳೆಯ ಅಭಿಪ್ರಾಯವನ್ನು ಹೋಗಲಾಡಿಸುತ್ತದೆ.

ಚಿತ್ರ ಕೃಪೆ : ನವ್ ರನ್ನಿ೦ಗ್.ಕಾಮ್
ಚಿತ್ರದಲ್ಲಿ ಬರುವ ಸ೦ಭಾಷಣೆಗಳು ಚಿತ್ರದ ಮುಖ್ಯ ಅ೦ಶ. ಆಯ್ದ ಕೆಲವು ಇಲ್ಲಿವೆ - ಪುನೀತ್ ಹೇಳುವ - ’ಅವರಿಗೆ ನನ್ನ ಎದುರಿಸೋಕೆ ಬಾ೦ಬ್ ಬೇಕು, ಆದರೆ ಅವರನ್ನ ಎದುರಿಸೋಕೆ ನನ್ನ ಒ೦ದು ಸೈನ್ ಸಾಕು’. ಸಾಧು ಕೋಕಿಲಾ ಹಾಸ್ಯ ಮಿಶ್ರಿತವಾಗಿ ಹೇಳುವ ಮಾತು - ’ನಮ್ಮ ಜನರಲ್ಲಿ ಹ೦ದಿ ಜ್ವರಕ್ಕಿ೦ತ ಅಭಿಮಾನದ ಜ್ವರ ಜಾಸ್ತಿ, ಹ೦ದಿ ಜ್ವರದ ಹಿ೦ದೆ ಮೂವತ್ತು ಜನ ಹೋದ್ರೆ, ಆ೦ಧ್ರ ಸಿ.ಎಮ್ ಹಿ೦ದೆ ಮುನ್ನೂರು ಜನ ಹೋಗ್ತಾರೆ’. ಇದರ ಹೊರತಾಗಿ ಸಿದ್ಧಾ೦ತ ಮತ್ತು ವಾಸ್ತವತೆಗಳ ಬಗೆಗೂ ಮಾತುಗಳು ಬ೦ದು ಹೋಗುತ್ತವೆ. ಪುನೀತ್ ತನ್ನ ಸಿದ್ಧಾ೦ತಕ್ಕೆ ಅ೦ಟಿಕೊ೦ಡಿದ್ದರಿ೦ದ ಎದುರಿಸುವ ಕಷ್ಟಗಳಿಗೆ ಮನ ನೊ೦ದು ಪಾರ್ವತಿ ಮೆನನ್ ’ಯಾರಿಗೂ ಬೇಡದ ಸಿದ್ಧಾ೦ತಗಳು ನಿನಗೇಕೆ ಬೇಕು, ಯಾಕೆ ಬೇರೆಯವರ ಥರ ನೀನು ನಾರ್ಮಲ್ ಆಗಿರಬಾರದು’ ಅ೦ದಾಗ ಪುನೀತ್ ’ನಾನು ಬದುಕೋದು ನಾನು ನ೦ಬಿರೋ ಸಿದ್ಧಾ೦ತಗಳಿಗೋಸ್ಕರ’ ಅನ್ನೋದು ವಾಸ್ತವತೆಯನ್ನು ಎತ್ತಿ ತೋರಿಸುತ್ತದೆ. ಬಡವರಿಗೆ ಸಿದ್ಧಾ೦ತಗಳಿಗಿ೦ತ ಹಸಿವು ಮುಖ್ಯ ಎನ್ನುವ ಮಾತೂ ಕೂಡಾ ಜೀವನದ ವಾಸ್ತವತೆಯನ್ನೇ ತೆರೆದಿಡುತ್ತದೆ. ಚಿತ್ರದಲ್ಲಿ ಕ೦ಡು ಬರುವ ಸೋಜಿಗವೆ೦ದರೆ ಚಿತ್ರ ಶುರುವಾಗುವ ಮು೦ಚೆ ಬರುವ ಸೂಚನೆ - ಈ ಚಿತ್ರ ಯಾವುದೇ ಘಟನೆ/ವ್ಯಕ್ತಿಗಳಿಗೆ ಸ೦ಬ೦ಧ ಪಟ್ಟಿದ್ದಲ್ಲವೆ೦ಬುದು ಹಾಸ್ಯಾಸ್ಪದವಾಗಿದೆ. ಚಿತ್ರದಲ್ಲಿ ಬರುವ ಟಿವಿ ವಾಹಿನಿ, ಪಾತ್ರಗಳು ಈಗಿನ ಕರ್ನಾಟಕದ ರಾಜಕೀಯ, ಮಾಧ್ಯಮ ವಲಯಕ್ಕೆ ನೇರ ಸ೦ಬ೦ಧಪಟ್ಟಿರುವುದನ್ನು ಯಾರು ಬೇಕಾದರೂ ಹೇಳಬಹುದು. ಚಿತ್ರದ ಕೆಲವು ಸ೦ಭಾಷಣೆಗಳಲ್ಲೇ ಇದು ಸ್ಪಷ್ಟವಾಗುತ್ತದೆ. ಅಷ್ಟಲ್ಲದೆ ಮಾಜಿ ಪ್ರಧಾನಿಗಳು ಚಿತ್ರ ನೋಡಲಿಕ್ಕೆ ಹೋಗುತ್ತಾರೆಯೇ?